ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕಲಬುರಗಿ:
ಕಲಬುರಗಿ ಮಹಾ ನಗರ ಪಾಲಿಕೆ ಚುನಾವಣೆ ಫಲಿತಾಂಶದ ಬೆನ್ನಲೆ ಕಲಬುರಗಿಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರದ ಗದ್ದುಗೆ ಏರಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಕಲಬುರಗಿ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಫೈನಲ್ ಆಟಕ್ಕೆ ಬಂದಿದ್ದು, ಅಂತಿಮವಾಗಿ ಗೆಲವು ನಮ್ಮದೆ. ಆದರೆ ಸದ್ಯ ಹೆಚ್. ಡಿ. ಕುಮಾರಸ್ವಾಮಿಯವರು ಯಾವುದೇ ರೀತಿಯ ಆಶ್ವಾಸನೆ ನೀಡಿಲ್ಲ. ಆದರೆ ಷರತ್ತು ಹಾಕದೇಯೇ ಬೆಂಬಲಿಸುವ ವಿಶ್ವಾಸವಿದೆ ಎಂದರು.