Wednesday, July 6, 2022

Latest Posts

ಕಲಬುರಗಿ| ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿಗೆ ಗುಂಡೇಟು

ಕಲಬುರಗಿ: ವಲಸೆ ಕಾರ್ಮಿಕನ ಮೊಬೈಲ್ ಕಿತ್ತುಕೊಳ್ಳಲು ಹೋಗಿ ಆತನನ್ನು ಕೊಲೆ ಮಾಡಿದ ಆರೋಪಿಗಳನ್ನು ಹಿಡಿಯಲು ಮುಂದಾದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಕಲಬುರಗಿ ನಗರದ ಹೊರವಲಯದ ಸುಲ್ತಾನಪುರ ಬಳಿ ಬುಧವಾರ ಬೆಳಿಗ್ಗೆ ಫೈರಿಂಗ್ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ಮೆಹಬೂಬ್ ನಗರದ ಮುಬಿನ್ ಅಲಿಯಾಸ್ ಅಬ್ದುಲ್ ರೆಹಮಾನ್ (23) ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ರಾತ್ರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ಮುಬಿನ್ ನನ್ನು ಬಂಧಿಸಿದ್ದ ಗ್ರಾಮೀಣ ಠಾಣೆ ಪೊಲೀಸರು ಬೆಳಿಗ್ಗೆ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಕರೆದೊಯ್ದಿದ್ದರು.
ಈ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಂಡು ‌ಹೋಗಲು ಯತ್ನಿಸಿದ‌ ಮುಬಿನ್ ಕಾಲಿಗೆ ಗ್ರಾಮೀಣ ಠಾಣೆ ಪೊಲೀಸ್  ಇನ್ ಸ್ಪೆಕ್ಟರ್ ಸೋಮಲಿಂಗ ಕಿರದಳ್ಳಿ ಗುಂಡು ಹಾರಿಸಿದರು.
ಆರೋಪಿ ಹಲ್ಲೆಗೆ ಯತ್ನಿಸಿದ್ದರಿಂದ ಒಬ್ಬ ಪೊಲೀಸ್ ಕಾನ್ ಸ್ಟೆಬಲ್ ಗೆ ಗಾಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss