ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಲಬುರಗಿ| ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಸಚಿವ ಶಾಸಕ‌‌ ಪ್ರಿಯಾಂಕ್ ಖರ್ಗೆ ಭೇಟಿ

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಸಚಿವ ಶಾಸಕ‌‌ ಪ್ರಿಯಾಂಕ್ ಖರ್ಗೆ ಶನಿವಾರ ಭೇಟಿ ನೀಡಿ ಸಂತ್ರಸ್ತರ ಅಹವಾಲು ಸ್ವೀಕರಿಸಿದರು.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಪ್ರಿಯಾಂಕ್​ ಖರ್ಗೆ, ಧಾರಾಕಾರವಾಗಿ ಕಳೆದ ದಿನಗಳಲ್ಲಿ ಸುರಿದ ಮಹಾ ಮಳೆಗೆ ಚಿತ್ತಾಪುರ ತಾಲೂಕಿನ ನದಿಗಳು,‌ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿರುವ ಪರಿಣಾಮ ಹಲವು ಗ್ರಾಮಗಳಿಗೆ ನೀರು ಹೊಕ್ಕು ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಸಾವಿರಾರು ಎಕರೆ ಜಮೀನು ನೀರುಪಾಲಾಗಿದ್ದು, ಬೆಳೆದ ಬೆಳೆಗಳೆಲ್ಲವೂ ಸಂಪೂರ್ಣ ನಾಶವಾಗಿದೆ. ಭೀಮಾ ನದಿ ಪ್ರವಾಹಕ್ಕೆ ಬಡಪಾಯಿಗಳ ಬದುಕು ಬೀದಿಪಾಲಾಗಿದ್ದು, ತಮ್ಮ ಕ್ಷೇತ್ರದ ಜನರ ಸಂಕಷ್ಟ ಅರಿಯುವ ಸಲುವಾಗಿ ಪ್ರಿಯಾ‌ಂಕ್ ಖರ್ಗೆ ಕಳೆದ ಎರಡು ದಿನದಿಂದ ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.

ಸತತ ಎರಡು ದಿನದಿಂದ ಚಿತ್ತಾಪುರ ತಾಲೂಕಿನ ಸುಮಾರು ಹತ್ತಕ್ಕೂ ಅಧಿಕ‌ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ,ನೊಂದ ಜನರಿಗೆ ಸಾಂತ್ವನ ಹೇಳಿ ಪ್ರವಾಹದ ಕುರಿತು ಮಾಹಿತಿ ಪಡೆದುಕೊಂಡು ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss