ಹೊಸದಿಗಂತ ವರದಿ,ಕಲಬುರಗಿ:
ಕಲಬುರಗಿ ನಗರದ ಜಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಡಿಸಿ ವಿ.ವಿ.ಜ್ಯೋತ್ಸ್ನಾ ಅವರು ಕೋವಿಡ್ ವ್ಯಾಕ್ಸಿನ್ ನೀಡುವ ಮೂಲಕ ವ್ಯಾಕ್ಸಿನ್ ಗೆ ಚಾಲನೆ ನೀಡಿದರು.
ಜೀಮ್ಸ್ ಆಸ್ಪತ್ರೆಯ ಡಿ.ಗ್ರೂಪ್’ ನ ನೌಕರ ಅನಂತರಾಜು ಅವರಿಗೆ ಮೊದಲ ಕೋವಿಡ್ ಲಸಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸದ.ಡಾ.ಉಮೇಶ್ ಜಾಧವ್, ಜಿಪಂ ಅಧ್ಯಕ್ಷೆ ಸುವರ್ಣಾ ಮಾಲಾಜಿ, ಶಾಸಕರಾದ ಬಸವರಾಜ ಮುತ್ರಿಮೂಡ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ,ಜಿಪಂ ಸಿಇಓ ಡಾ.ಪಿ.ರಾಜಾ, ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಕವಿತಾ ಪಾಟೀಲ್, ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಶೇಖರ್ ಮಾಲಿ ಇನ್ನಿತರ ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.
ಡಿಸಿ ಪರಿಶೀಲನೆ: ಲಸಿಕೆ ನೀಡುವ ಮುನ್ನ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಅವರು ಸಿದ್ಧತೆಗಳ ಪರಿಶೀಲಿಸಿದರು. ಇಲ್ಲಿನ ಕೊರೋನಾ ಲಸಿಕೆ ಕೇಂದ್ರ ಹಾಗೂ ನೋಂದಣಿ ಕೊಠಡಿಯನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು.
ಬಳಿಕ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ನೇರಪ್ರಸಾರ ವೀಕ್ಷಿಸುತ್ತಿದ್ದಾರೆ.