ಕಲಬುರಗಿ: ದಿವಂಗತ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಏಕತಾ ದಿವಸ್ ಅನ್ನು ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಅವರು ರಾಷ್ಟ್ರೀಯ ಏಕತಾ ದಿವಸ್ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
“ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ ಮತ್ತು ನನ್ನ ದೇಶ ಬಾಂಧವರಲ್ಲಿ ಈ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ನಾನು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ.
ಸರ್ದಾರ್ ವಲಭಭಾಯ್ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಫೂರ್ತಿಯನ್ನು ಕಾಪಾಡುತ್ತೇನೆ ಎಂದು ಪ್ರಮಾಣ ಮಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ನಾನು ನನ್ನದೇ ಆದ ಕೊಡುಗೆಯನ್ನು ನೀಡುತ್ತೇನೆ ಎಂದು ಒಮ್ಮನಿಸ್ಸಿನಿಂದ ಪ್ರತಿಜ್ಞೆ ಮಾಡುತ್ತಿದ್ದೇನೆ ಎಂದು ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್, ಡಿಸಿಪಿ ಡಿ. ಕಿಶೋರ ಬಾಬು ಮುಂತಾದವರು ಇದ್ದರು.