spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಲಬುರಗಿ| ಸೊನ್ನ ಬ್ಯಾರೇಜಿನಿಂದ 2500 ಕ್ಯೂಸೆಕ್ಸ್ ನೀರು ಭೀಮಾ‌ನದಿಗೆ

- Advertisement -Nitte

ಕಲಬುರಗಿ: ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ನೀರಿನ ಒಳ ಹರಿವು ಹೆಚ್ಚಿದ್ದು, ಅದರಂತೆ ಸೋಮವಾರ ಬ್ಯಾರೇಜಿನಿಂದ 2500 ಕ್ಯೂಸೆಕ್ಸ್ ನೀರು ಭೀಮಾ ನದಿಗೆ ಹರಿಸಲಾಗಿದೆ ಎಂದು ಭೀಮಾ ಏತ‌ ನೀರಾವರಿ ಯೋಜನೆಯ ಕಾರ್ಯಪಾಲಕ ಅಭಿಯಂತ ಅಶೋಕ ಆರ್. ಕಲಾಲ್ ತಿಳಿಸಿದ್ದಾರೆ.
ಬ್ಯಾರೇಜಿಗೆ ಒಳಹರಿವಿನ‌ ನೀರಿನ ಪ್ರಮಾಣ 2500 ಕ್ಯೂಸೆಕ್ಸ್ ಇದ್ದು, ಅಷ್ಟೆ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿದೆ. ಆದರಿಂದ ನದಿ ಡಂಡೆಯಲ್ಲಿರುವ ಸಾರ್ವಜನಿಕರು ನದಿಯ ದಡಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಪ್ರದೇಶದ ರೈತರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.
ಸೊನ್ನ ಬ್ಯಾರೇಜ್ ಸಾಮರ್ಥ್ಯ 3.16 ಟಿ‌ಎಂ‌ಸಿ. ಇದ್ದು, ಸೋಮವಾರ ಬೆಳಿಗ್ಗೆ 2.8 ಟಿ.ಎಂ.ಸಿ. ನೀರು ಸಂಗ್ರಹಣಗೊಂಡಿದೆ. ಕಳೆದ ವರ್ಷ ಇದೇ ದಿನಕ್ಕೆ ಹೋಲಿಸಿದರೆ ನೀರಿನ ಸಂಗ್ರಹಣೆ‌ ಪ್ರಮಾಣ ಹೆಚ್ಚಿದೆ. ಕಳೆದ ವರ್ಷದ ಆಗಸ್ಟ್ 2ನೇ ವಾರದಲ್ಲಿ ಈ ಪ್ರಮಾಣದ ನೀರು ಬ್ಯಾರೇಜಿನಲ್ಲಿ ಸಂಗ್ರಹವಾಗಿತ್ತು ಎಂದರು.
ಜುಲೈ ಮತ್ತು ಆಗಸ್ಟ್ ಮಾಹೆಯಲ್ಲಿ ಭೀಮಾ ಜಲಾನಯನ ಪ್ರದೇಶದಲ್ಲಿ ಮಳೆ ಬರುವ ಸಾಧ್ಯತೆ ಹೆಚ್ಚಿದ್ದು, ಆಗ ನೀರಿನ ಒಳಹರಿವು ಇನ್ನು ಹೆಚ್ಚಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು 2500 ಕ್ಯೂಸೆಕ್ಸ್ ನೀರು ನದಿಗೆ ಹರಿಸಲಾಗಿದೆ ಎಂದು ಅಶೋಕ ಆರ್. ಕಲಾಲ್ ತಿಳಿಸಿದರು.
ಇದಲ್ಲದೆ 3.5 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸಾಮರ್ಥ್ಯವಿರುವ ಮೂರು ಘಟಕಗಳ ಪೈಕಿ ಎರಡು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸಹಬಮಾಡಲಾಗುತ್ತಿದೆ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss