Wednesday, June 29, 2022

Latest Posts

ಕಲಬುರ್ಗಿ: ಮಾಜಿ ಸಚಿವ ದಿ. ಜಿ.ರಾಮಕೃಷ್ಣ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ಕಲಬುರ್ಗಿ: ವಯೋ ಸಹಜ ಕಾಯಿಲೆಯಿಂದ ಇತ್ತೀಚಿಗೆ ನಿಧನರಾದ ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ದಿ.ಜಿ.ರಾಮಕೃಷ್ಣ ಅವರ ಮನೆಗೆ ರಾಜ್ಯದ ಉಪಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಮತ್ತು ಲೋಕೋಪಯೋಗಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಅವರಲ್ಲಿ ಆತ್ಮಸ್ಥೈರ್ಯ ತುಂಬಿದರು.

ದಿ.ಜಿ.ರಾಮಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪ‌ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ದಿವಂಗತ ಶಾಸಕರ ಪುತ್ರ ವಿಜಯಕುಮಾರ ರಾಮಕೃಷ್ಣ, ಜಿಲ್ಲಾ ಪಂಚಾಯತ್ ಸದಸ್ಯ ಶಿವರಾಜ ಪಾಟೀಲ ರದ್ದೆವಾಡಗಿ, ಮುಖಂಡ ರಾಜು ವಾಡೇಕರ್ ಸೇರಿದಂತೆ ಕುಟುಂಬದ ಸದಸ್ಯರು ಇದ್ದರು‌.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss