Sunday, July 3, 2022

Latest Posts

ಕಲ್ಯಾಣ ಕರ್ನಾಟಕ ಭಾಗದ 115 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪ್ರಭು ಚೌವ್ಹಾಣ್

ಯಾದಗಿರಿ: ಪಶುಸಂಗೋಪನೆ ಇಲಾಖೆಯ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ಅನುಚ್ಚೇದದ ಭಾಗವಾಗಿರುವ ಬ್ಯಾಕ್ ಲಾಗ್ ಹುದ್ದೆಗಳು ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದವು. ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡದೆ ನಿರ್ಲಕ್ಷ ತೊರಿತ್ತು. ಈಗ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಿಕೊಳ್ಳಲು ಕ್ರಮ ವಹಿಸಲಾಗಿದ್ದು ಸದ್ಯದಲ್ಲೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಪಶು ಸಂಗೋಪನಾ ಪ್ರಭು ಚವ್ಹಾಣ್ ಮಾಧ್ಯಮ ತಿಳಿಸಿದ್ದಾರೆ.
ಅಲ್ಲದೇ ಕೊವಿಡ್-19 ಸಂಕಷ್ಟದ ಸಮಯದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿರುವುದು ಮತ್ತಷ್ಟು ಸಂತಸ ತಂದಿದೆ ಎಂದು ಸಚಿವರು ಹೇಳಿದ್ದಾರೆ.
ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಕುರಿತು ಮುಖ್ಯಮಂತ್ರಿಗಳೊoದಿಗೆ ಚರ್ಚಿಸಿದ್ದರ ಪರಿಣಾಮವಾಗಿ ಖಾಲಿ ಇರುವ ಹುದ್ದೆಗಳನ್ನು ಶ್ರೀಘ್ರದಲ್ಲಿ ತುಂಬಿಕೊಳ್ಳುಲು ಕ್ರಮ ಕೈಗೊಳ್ಳುದಾಗಿ ಸಿ.ಎಂ ಸಹ ಭರವಸೆ ನೀಡಿದ್ದರು. ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಸಂವಿಧಾನದ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗೆ ಮೀಸಲಾಗಿರುವ 32 ಪಶುವೈದ್ಯ ಪರೀಕ್ಷಕರ ಹುದ್ದೆಗಳನ್ನು ಹಾಗೂ 83 ಪಶುವೈದ್ಯಕೀಯ ಸಹಾಯಕ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗುತ್ತಿದೆ.
ಮೂಲ ವೃಂದದ ಒಟ್ಟು ವೃಂದದ ಬಲದಲ್ಲಿ 371ಜೆ ಅಡಿಯಲ್ಲಿ ಸ್ಥಳೀಯ ವೃಂದದಲ್ಲಿ ಶೇ 75% ಪ್ರಮಾಣದಲ್ಲಿ ಮೀಸಲಿರಿಸಿದ 32 ಪಶುವೈದ್ಯ ಪರೀಕ್ಷಕರ ಹುದ್ದೆಗಳನ್ನು ಹಾಗೂ 83 ಪಶುವೈದ್ಯಕೀಯ ಸಹಾಯಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಿಕೊಳ್ಳಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ಮತ್ತು ಉದ್ಯೋಗ ಸೃಷ್ಠಿಗೆ ಇನ್ನೂ ಹೆಚ್ಚಿನ ಒತ್ತು ನೀಡಲಾಗುವುದು. ಅಲ್ಲದೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಭು ಚೌವ್ಹಾಣ್ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss