Thursday, August 11, 2022

Latest Posts

ಕಳೆದ 24 ಗಂಟೆಗಳಲ್ಲಿ 56,282 ಸೋಂಕಿತರು: 13.28 ಲಕ್ಷ ಮಂದಿ ಗುಣಮುಖ

ಹೊಸದಿಲ್ಲಿ:  ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 56,282 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, 904 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಭಾರತದಲ್ಲಿ ಒಟ್ಟು 19,64,537 ಸೋಂಕಿತರು ದಾಖಲಾಗಿದ್ದು, ಇವರಲ್ಲಿ 5,95,501 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೂ 13,28,337 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 904 ಬಲಿಯಾಗಿದ್ದಾರೆ. ದೇಶದಲ್ಲಿ 40,699 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ಮಹಾರಾಷ್ಟ್ರದಲ್ಲಿ 4,57,956 ಮಂದಿ ಸೋಂಕಿತರು ವರದಿಯಾಗಿದ್ದು, 2,99,356 ಮಂದಿ ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ 2,68,285 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 2,08,784 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss