Wednesday, June 29, 2022

Latest Posts

ಕಳೆದ 24 ಗಂಟೆಗಳಲ್ಲಿ 57,982 ಕೊರೋನಾ ಪ್ರಕರಣಗಳು: ದೇಶದ ಶೇ.75ರಷ್ಟು ಸೊಂಕಿತರು ಗುಣಮುಖ

ಹೊಸದಿಲ್ಲಿ: 24 ಗಂಟೆಗಳಲ್ಲಿ 57,982 ಕೊರೋನಾ ಸೊಂಕಿತರು ಪತ್ತೆಯಾಗಿದ್ದು, 941 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ದೇಶದಲ್ಲಿ ಈವರೆಗೂ 26,47,664 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಇವರಲ್ಲಿ 6,76,900 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಈಗಾಗಲೇ 19,19,843 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 50,921 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಆ.16ರಂದು ದೇಶದಲ್ಲಿ 7,31,697 ಕೊರೋನಾ ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು, ದೇಶದಲ್ಲಿ ಈಗಾಗಲೇ 3,00,41,400 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂ ಆರ್ ವರದಿ ಮಾಡಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss