Friday, July 1, 2022

Latest Posts

ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಲು ರಾಜ್ಯದಲ್ಲಿ ಸರ್ಕಾರವೆಂಬುದೇ ಇಲ್ಲ: ರಾಜ್ಯ ಕಾಂಗ್ರೆಸ್ ಆರೋಪ

ಬೆಂಗಳೂರು: ಹಲವು ಬಗೆಯ ಕಷ್ಟನಷ್ಟಗಳನ್ನು ಎದುರಿಸುತ್ತಿರುವ ಜನರಿಗೆ ಸ್ಪಂದಿಸಲು ರಾಜ್ಯದಲ್ಲಿ ಸರಕಾರವೆಂಬುದೇ ಇಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಗುಡುಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಹಲವು ಬಗೆಯ ಕಷ್ಟನಷ್ಟಗಳನ್ನು ಎದುರಿಸುತ್ತಿರುವ ಜನರಿಗೆ ಸ್ಪಂದಿಸಲು ರಾಜ್ಯದಲ್ಲಿ ಸರಕಾರವೆಂಬುದೇ ಇಲ್ಲ. ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಕೇಂದ್ರದಿಂದ ಆರ್ಥಿಕ ನೆರವು ಕೋರಲು ಧೈರ್ಯವಿಲ್ಲದ ಪುಕ್ಕಲು ಸರ್ಕಾರ ರಾಜ್ಯದಲ್ಲಿದೆ  ಎಂದು ಟೀಕೆ ಮಾಡಿದೆ.

ಆಪರೇಷನ್ ಕಮಲಕ್ಕೆ ಒಳಗಾದವರು, ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ಸೇರಿದ್ದೇವೆಂದು ಹೇಳಿಕೊಂಡವರು, ನಿದ್ರಾವಸ್ಥೆಯಲ್ಲಿರುವ ಸರ್ಕಾರದಲ್ಲಿ ಮಂತ್ರಿಗಳಾಗಿದ್ದಾರೆ. ಒಂದು ವರ್ಷದಿಂದ ಕಡಿದು ಗುಡ್ಡೆ ಹಾಕಿದ್ದೇನು? ಎಂದು ಪ್ರಶ್ನಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss