Thursday, August 11, 2022

Latest Posts

ಕಾಂಗ್ರೆಸ್’ನ ಹಿರಿಯ ನಾಯಕ ಮಾಧವ್ ಸಿನ್ಹಾ ಸೋಲಂಕಿ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಗುಜರಾತ್ ನ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನಾಯಕ ಮಾಧನ್ ಸಿನ್ಹಾ ಸೋಲಂಕಿ (93) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಸೋಲಂಕಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಸೋಲಂಕಿ ಅವರು ಮಾಜಿ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮಾಧವ ಸಿನ್ಹಾ ಸೋಲಂಕಿ ಜಿ ಅವರು ಅಸಾಧಾರಣ ನಾಯಕರಾಗಿದ್ದರು, ಗುಜರಾತ್ ರಾಜಕೀಯದಲ್ಲಿ ದಶಕಗಳ ಕಾಲ ಪ್ರಮುಖ ಪಾತ್ರ ವಹಿಸಿದ್ದರು. ಸಮಾಜಕ್ಕೆ ಅವರು ಮಾಡಿದ ಸಮೃದ್ಧ ಸೇವೆಯಿಂದ ಅವರು ನೆನಪಿನಲ್ಲಿರುತ್ತಾರೆ. ಅವರ ನಿಧನದಿಂದ ದುಃಖಿತರಾಗಿರುವ ಪುತ್ರ ಭಾರತ್ ಸೋಲಂಕಿ ಜಿ ಅವರೊಂದಿಗೆ ಮಾತನಾಡಿ ಸಂತಾಪ ಸೂಚಿಸಿದ್ದೇನೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

1981ರಲ್ಲಿ ಮಾಧವ ಸಿನ್ಹಾ ಸೋಲಂಕಿ ಗುಜರಾತ್ ಮುಖ್ಯಮಂತ್ರಿಯಾದರು. ನಾಲ್ಕು ಭಾರಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸೋಲಂಕಿ ಅವರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿಯನ್ನು ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss