ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ .
ಈ ಬಗ್ಗೆ ಹಿರಿಯ ವೈದ್ಯರು ಮಾಹಿತಿ ನೀಡಿದ್ದು, ಸೋನಿಯಾ ಅವರ ಆರೋಗ್ಯ ಈಗ ಸ್ಥಿರವಾಗಿದೆ.
ಜುಲೈ 30 ರ ಗುರುವಾರ ಸಂಜೆ 7 ಗಂಟೆಗೆ ಸೋನಿಯಾ ಗಾಂಧಿ ಅವರು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು.