Saturday, July 2, 2022

Latest Posts

ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಗೆಲುವು ಕಟ್ಟಿಟ್ಟ ಬುತ್ತಿ: ಅರವಿಂದಕುಮಾರ ಅರಳಿ

ಬೀದರ್ : ಕರ್ನಾಟಕ ಈಶಾನ್ಯ ವಲಯ ಶಿಕ್ಷಕರ ಮತಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್‍ಗೆ ಅಕ್ಟೋಬರ್ 28 ರಂದು ನಡೆದ ಚುನಾವಣೆಯಲ್ಲಿ ಬೀದರ ಜಿಲ್ಲೆಯ ಬೀದರ ತಹಸೀಲ್ ಕಚೇರಿಯ ಮತದಾನ ಕೇಂದ್ರದ ಹೊರಗಡೆ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಚುನಾವಣಾ ಪ್ರಚಾರದ ಬಳಿಕ ಸುದ್ದಿ ವಾಹಿನಿಗಳೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರು, ಶರಣಪ್ಪ ಮಟ್ಟೂರು ಎಮ್ಮೆಲ್ಸಿಯಾಗಿದ್ದಾಗ, ಕ್ಷೇತ್ರದ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಬೀದರ ಶಾಸಕರಾದ ರಹೀಮಖಾನ ಅವರು ಮಾತನಾಡುತ್ತ, ಕರ್ನಾಟಕ ಈಶಾನ್ಯ ವಲಯ ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಅಕ್ಟೋಬರ್ 28 ರಂದು ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಭಾರೀ ಒಲುವು ಇದೆ ಎಂದರು.
ಕಾಂಗ್ರೆಸ್ ಪಕ್ಷದ ಬೀದರ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ  ಮಾತನಾಡುತ್ತ, ಕರ್ನಾಟಕ ಈಶಾನ್ಯ ವಲಯ ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರು ಮತ್ತೊಮ್ಮೆ ಆಯ್ಕೆಯಾಗಲಿದ್ದಾರೆ ಎಂದರು.
ಶಿಕ್ಷಕರ ಹಾಗೂ ಪದವಿಧರರ ಸಂಘದ ಬೀದರ ಜಿಲ್ಲಾ ಘಟಕದ ಜಾನ್ ವೇಸ್ಲಿ ಅವರು ಮಾತನಾಡುತ್ತ, ಕರ್ನಾಟಕ ಈಶಾನ್ಯ ವಲಯ ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಪರವಾಗಿ ಬೀದರ ಜಿಲ್ಲೆಯ ಮತದಾರರು ಪ್ರಚಂಡ ಬಹುಮತದಿಂದ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಇರ್ಷಾದ ಪೈಲ್ವಾನ, ಸುನೀಲ ಬಚ್ಚನ, ಯುಸೂಫ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss