Sunday, August 14, 2022

Latest Posts

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಗೂ ಕೊರೋನಾ ಸೋಂಕು

ಬೆಂಗಳೂರು: ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಯಾವುದೇ ರೋಗ ಲಕ್ಷಣ ಇಲ್ಲದಿದ್ದರೂ, ಕೊರೋನಾ ಟೆಸ್ಟ್ ನಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ.

ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss