Wednesday, August 17, 2022

Latest Posts

ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ದ.ಕ. ಮಾಜಿ ಜಿಲ್ಲಾಧಿಕಾರಿ ​ಸಸಿಕಾಂತ್ ಸೆಂಥಿಲ್

ಹೊಸ ದಿಂಗತ ಆನ್ ಲೈನ್ ಡೆಸ್ಕ್:

ಕಳೆದ ವರ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 2009ರ ಕರ್ನಾಟಕ ಬ್ಯಾಚ್​ನ ಐಎಎಸ್ ಅಧಿಕಾರಿ ಹಾಗೂ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ​ಸಸಿಕಾಂತ್ ಸೆಂಥಿಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ತಮಿಳುನಾಡಿನ ಕಾಂಗ್ರೆಸ್​ನ ರಾಜ್ಯಾಧ್ಯಕ್ಷರಾದ ಕೆ.ಆಳಗಿರಿ, ತಮಿಳುನಾಡಿಗೆ ಎಐಸಿಸಿ ಉಸ್ತುವಾರಿಯಾದ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಕಾರ್ಯದರ್ಶಿಗಳು ಹಾಗೂ ಹಲವು ಮುಖಂಡರ ನೇತೃತ್ವದಲ್ಲಿ ಪಕ್ಷದ ಪ್ರಧಾನ ಕಚೇರಿ ಸತ್ಯಮೂರ್ತಿ ಭವನದಲ್ಲಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್​​ಗೆ ಸೇರ್ಪಡೆಯಾದರು.
41 ವರ್ಷದ ಸಸಿಕಾಂತ್ ಸೆಂಧಿಲ್ 2009ರಲ್ಲಿ ಕರ್ನಾಟಕ ಕೇಡರ್​ನಲ್ಲಿ ಭಾರತೀಯ ನಾಗರಿಕ ಸೇವೆಗೆ ಸೇರ್ಪಡೆಯಾಗಿದ್ದರು. ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಂವಿಧಾನದ ಸಿದ್ಧಾಂತಗಳಿಗೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಸಸಿಕಾಂತ್ ಸೆಂಥಿಲ್ ಭಾನುವಾರ ಹೇಳಿದ್ದು, ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!