Wednesday, July 6, 2022

Latest Posts

ಕಾಂಗ್ರೆಸ್ ಪಾಪದ ಫಲವೇ ಬೆಂಗಳೂರಿನ ಗಲಭೆಗೆ ಕಾರಣ: ಎಚ್.ವಿಶ್ವನಾಥ್

ಮೈಸೂರು: ಕಾಂಗ್ರೆಸ್ ಪಾಪದ ಫಲವೇ ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ಗಲಭೆ ನಡೆಯಲು ಕಾರಣವಾಗಿದೆ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದರು.

ಶುಕ್ರವಾರ ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜಿ ಹಳ್ಳಿಯಲ್ಲಿ ನಡೆದ ಗಲಭೆಗೂ ಬಿಜೆಗೂ ಯಾವುದೇ ಸಂಬಧ ಇಲ್ಲ. ಈ ಘಟನೆಗೆ ಕಾಂಗ್ರೆಸ್ ಹಾಗೂ ಬೇರೆ ಬೇರೆ ಸಂಘಟನೆಗಳ ಬೆಂಬಲವಿದೆ. ಬಿಜೆಪಿಗೆ ಇಂತಹ ಗಲಭೆ ಸೃಷ್ಟಿಸುವ ಅಗತ್ಯವಿಲ್ಲ ಎಂದರು.

ಇದು ಕಾಂಗ್ರೆಸ್ ಹಾಗೂ ಸ್ಥಳೀಯ ಸಂಘಟನೆಗೂ ನಡೆಯುತ್ತಿರುವ ಗಲಭೆ. ಸಿಎಎ ಹೋರಾಟದಲ್ಲಿ ಪ್ರಚೋದನಕಾರಿ ಭಾಷಣಗಳು ಇದಕ್ಕೆಲ್ಲಾ ಕಾರಣ. ವಿಪಕ್ಷಗಳು ಜನರನ್ನು ಉದ್ರೇಕಗೊಳಿಸಿದ್ದು, ಇನ್ನೂ ಅದರ ಬಿಸಿ ಕೆಂಡವಾಗಿ ಉಳಿದಿದೆ. ಆ ಕೆಂಡವನ್ನೇ ಇಟ್ಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬಿದ್ದಾಗ ಅವರ ಮನೆಗೆ ಹೋಗಿ ಸಾಂತ್ವನ ಹೇಳಿಲ್ಲ. ಬೆಂಕಿ ಹಾಕಿದವರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ. ಪಾದರಾಯನಪುರ ವಿಚಾರದಲ್ಲಿ ಜೈಲಿಗೆ ಹೋಗಿ ಬಂದವರನ್ನು ಮಾಲೆ ಹಾಕಿ ಸ್ವಾಗತಿಸಿದರು. ಇವರೇನು ಸ್ವಾತಂತ್ರ÷್ಯ ಹೋರಾಟ ಮಾಡಲು ಹೋಗಿದ್ದರಾ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss