Tuesday, December 23, 2025

ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ED ದಾಳಿ: 14.13 ಕೋಟಿ ಹಣ ಇರುವ ಬ್ಯಾಂಕ್‌ ಖಾತೆ ಸೀಜ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ ನಡೆಸಿದ್ದು ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದೆ.

1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಇ.ಡಿ ಸೀಜ್‌ ಮಾಡಿದೆ.

ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್‌ ಸೈಲ್‌ ಹೊರಗಿದ್ದಾರೆ. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

error: Content is protected !!