Saturday, June 25, 2022

Latest Posts

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿಗೆ ತುತ್ತಾಗಿದ್ದ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಅವರು  ಬುಧವಾರ ಮುಂಜಾನೆ ನಿಧನರಾಗಿದ್ದಾರೆ.

ತಿಂಗಳ ಹಿಂದಷ್ಟೆ ಅಹ್ಮದ್ ಪಟೇಲ್ (71 ) ಅವರಿಗೆ ಕೊರೋನಾ  ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ದಾಖಲಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಅಹ್ಮದ್ ಪಟೇಲ್ ಪುತ್ರ ಫೈಸಲ್ ಪಟೇಲ್ ಟ್ವೀಟ್ ಮಾಡಿದ್ದು, ನನ್ನ ತಂದೆ ಅಹ್ಮದ್ ಪಟೇಲ್ ಇಂದು ಮುಂಜಾನೆ 3:30 ಕ್ಕೆ ಅಕಾಲಿಕ ನಿಧನರಾದರು. ತಿಂಗಳ ಹಿಂದಷ್ಟೆ ಅವರಿಗೆ ಕೊರೋನಾ ದೃಢವಾಗಿತ್ತು, ಅಂಗಾಂಗ ವೈಫಲ್ಯಗಳಿಂದಾಗಿ ನನ್ನ ತಂದೆ ಅವರ ಆರೋಗ್ಯ ಇನ್ನಷ್ಟು ಹದಗೆಟ್ಟಿತು ಎಂದಿದ್ದಾರೆ. ಇದೇ ಸಮಯದಲ್ಲಿ ಎಲ್ಲರೂ ಕೊರೋನಾ ನಿಯಮಗಳನ್ನು ಪಾಲಿಸಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಫೈಸಲ್ ಪಟೇಲ್ ಮನವಿ ಮಾಡಿಕೊಂಡಿದ್ದಾರೆ.

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss