ಚೆನ್ನೈ: ಕರ್ನಾಟಕ ಮತ್ತು ತಮಿಳುನಾಡಿಗೆ ಎರಡು ದಶಕ ಸಿಂಹಸ್ವಪ್ನವಾಗಿ ಕಾಡಿದ್ದ ದಂತಚೋರ ವೀರಪ್ಪನ್ ಪುತ್ರಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ವೃತ್ತಿಯಲ್ಲಿ ವಕೀಲೆಯಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ವೀರಪ್ಪನ್ ಪುತ್ರಿ ವಿದ್ಯಾರಾಣಿ ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನಗೆ ಜನರ ಸೇವೆ ಮಾಡಬೇಕೆಂಬ ಅಭಿಲಾಷೆ ಇದೆ. ಜನ ಮತ್ತು ರಾಷ್ಟ್ರ ರಕ್ಷಣೆ ಉದ್ದೇಶದೊಂದಿಗೆ ಬಿಜೆಪಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.