ಹೊಸದಿಗಂತ ವರದಿ,ಧಾರವಾಡ:
ತಾಲೂಕಿನ ಮಾರಡಗಿ ಗ್ರಾಮದಲ್ಲಿ ಕಾಣೆಯಾದ ವ್ಯಕ್ತಿ ಭಾನುವಾರ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ.
ಹೆಬ್ಬಳ್ಳಿ ಗ್ರಾಮದ ಬಸು ಹಡಪದ ಮೃತ ವ್ಯಕ್ತಿ. ಮೂರು ದಿನಗಳ ಹಿಂದೆ ಕುಟುಂಬಸ್ಥರು ಗ್ರಾಮೀಣ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.