Saturday, July 2, 2022

Latest Posts

ಕಾಫಿ ಬೆಳೆಗಾರರ ಸಾಲದ ಮೇಲಿನ ಬಡ್ಡಿ ಮನ್ನಾಕ್ಕೆ ಒತ್ತಾಯಿಸಿ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಸದೆ ಶೋಭಾಕರಂದ್ಲಾಜೆ ಮನವಿ

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಕಾಫಿ ಬೆಳೆಗಾರರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವಂತೆ ಒತ್ತಾಯಿಸಿ ಸಂಸದೆ ಶೋಭಾಕರಂದ್ಲಾಜೆ ಬುಧವಾರ ದೆಹಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಹಿಂದೆ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಮತ್ತು ಬೆಂಗಳೂರಿನಿಂದ ಸಂಸದೆ ಶೋಭಾಕರಂದ್ಲಾಜೆ ಅವರುಗಳು ವೀಡೀಯೋ ಕಾನ್ಫೆರೆನ್ಸ್ ನಡೆಸಿ, ಬೆಳೆಗಾರರ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದಿದ್ದರು.
ಈ ವೀಡಿಯೋ ಕಾನ್ಫ್‍ರೆನ್ಸ್‍ನಲ್ಲಿ ಭಾಗವಹಿಸಿದ್ದ ಕಾಫಿ, ಕಾಳುಮೆಣಸು, ಅಡಿಕೆ, ತೆಂಗು ಬೆಳೆಗಾರರು ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಹಾಗೂ ಆಗಬೇಕಾಗಿರುವ ಕೆಲಸಗಳ ಮಾಹಿತಿಯನ್ನು ಕೇಂದ್ರ ಹಣಕಾಸುಸಚಿವರಿಗೆ ನೀಡಿದ್ದರು. ಸಾಲದ ಮೇಲಿನ ಬಡ್ಡಿಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದರು ಹಾಗೂ ಕಾಫಿ ಉದ್ಯಮದ ಏಳು, ಬೀಳುಗಳನ್ನು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವ ಆಶಯವನ್ನು ಸಚಿವರು ವ್ಯಕ್ತಪಡಿಸಿದ್ದರು.
ಆದರೆ ಕೆಲವು ಬ್ಯಾಂಕಿನವರು ಸಾಲ ಮರುಪಾವತಿಗೆ ನೋಟೀಸ್ ನೀಡಲು ಮುಂದಾಗಿದ್ದು, ಕಾಫಿಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಕೇಂದ್ರಸರ್ಕಾರದ ಮೇಲೆ ಒತ್ತಡ ತರಲು ಕಾಫಿ ಬೆಳೆಯುವ ಜಿಲ್ಲೆಗಳಿಂದ ಆಯ್ಕೆಯಾಗಿರುವ ಸಂಸದರಿಗೆ ಬೆಳೆಗಾರರು ಮನವಿ ಪತ್ರವನ್ನು ಸಲ್ಲಿಸಿದ್ದರು.
ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿರುವ ಸಂಸದೆ ಶೋಭಾ ಕರಂದ್ಲಾಜೆ, ಬೆಳೆಗಾರರು ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು. ಸಹಕಾರ ಬ್ಯಾಂಕುಗಳಲ್ಲಿ ನೀಡುವಂತೆ ಶೇ. 3 ರಬಡ್ಡಿದರಲ್ಲಿ ಸಾಲ ಕೊಡಬೇಕು. ಎಲ್ಲಾ ಸಾಲಗಳನ್ನು ತೆಗೆದುಹಾಕಿ ಒಂದೇ ಸಾಲವನ್ನಾಗಿಸಬೇಕು. ಸಾಲ ತೀರಿಸಲು 9 ಕಂತುಗಳ ಅವಕಾಶ ಮಾಡಿಕೊಡಬೇಕು. 2 ವರ್ಷ ಸಾಲಪಾವತಿಸದಂತೆ ಕಾಲಾವಕಾಶಮಾಡಿಕೊಡಬೇಕೆಂದು ಒತ್ತಾಯಿಸಿ ಕೇಂದ್ರ ವಿತ್ತಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss