ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕರಾಗಿದ್ದ ದಿವಂಗತ ದಿಗ್ವಿಜಯ್ ಸಿಂಗ್ ಪುತ್ರಿ ಶ್ರೇಯಸಿ ಸಿಂಗ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಶ್ರೇಯಸಿ ಸಿಂಗ್ ಕಾಮನ್ವೆಲ್ತ್ ಕ್ರೀಡೆಯಲ್ಲಿ ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ ಕೀರ್ತಿ ಹೊಂದಿದ್ದಾರೆ. ಇಂದು ಬಿಜೆಪಿ ಹಿರಿಯ ನಾಯಕರಾದ ಭೂಪೇಂದ್ರ ಯಾದವ್ ಮತ್ತು ಅರುಣ್ ಸಿಂಗ್ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ನನ್ನ ತಾಯಿ ಹಾಗೂ ಹಿರಿಯ ಸಹೋದರಿಯ ಆಶ್ರೀರ್ವಾದದೊಂದಿಗೆ ಬಿಜೆಪಿಯ ಸದಸ್ವತ್ವವನ್ನು ಸ್ವೀಕರಿಸಿದ್ದೇನೆ. ನನ್ನ ತಂದೆಯ ಕನಸು ಈಡೇರಿಸುವುದೇ ನನ್ನ ಮುಖ್ಯ ಗುರಿ ಎಂದು ಶ್ರೇಯಸಿ ಹೇಳಿದರು.