Tuesday, November 24, 2020

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿದ ಸಚಿವ ಪ್ರಭು ಚವ್ಹಾಣ್

ಬೀದರ:  ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಶುಕ್ರವಾರ ಜಿಲ್ಲೆಯ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿ, ನೀರಿನ ಮಟ್ಟ ಹಾಗೂ ಒಳಹರಿವಿನ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ವಿವರಣೆ ಪಡೆದರು.
ಈ ವೇಳೆ ಮಾತನಾಡಿದ ಸಚಿವರು, ಪಕ್ಕದ ರಾಜ್ಯಗಳಲ್ಲಿಯೂ ವಿಪರೀತ ಮಳೆಯಾಗಿರುವುದರಿಂದ ಜಲಾಶಯಕ್ಕೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುವ ಸಾಧ್ಯತೆಗಳಿವೆ. ಹಾಗಾಗಿ ನದಿ ಪಾತ್ರದ ಗ್ರಾಮಗಳಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಬೇಕು. ಮುಳುಗಡೆ ಭೀತಿ ಇರುವ ಗ್ರಾಮಗಳಲ್ಲಿನ ಜನ-ಜಾನುವಾರುಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಮನೆಗೆ ನೀರು ನುಗ್ಗಿ ಸಂಕಷ್ಟ ಎದುರಿಸುತ್ತಿರುವುದು ಕಂಡುಬಂದಲ್ಲಿ ತಕ್ಷಣ ಅಂಥವರ ನೆರವಿಗೆ ಧಾವಿಸಬೇಕು. ನೀರು ಮನೆಗಳಲ್ಲಿ ನುಗ್ಗಿ ಆಹಾರಧಾನ್ಯಗಳೆಲ್ಲವೂ ನಾಶವಾಗುತ್ತವೆ. ಅಂಥಹ ಕುಟುಂಬಸ್ಥರಿಗೆ ನೆರವು ಕಲ್ಪಿಸಬೇಕು ಯಾರೊಬ್ಬರೂ ಸಹ ಸಂಕಷ್ಟ ಎದುರಿಸದ ಹಾಗೆ ನೋಡಿಕೊಳ್ಳಬೇಕು. ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಈ ಬಗ್ಗೆ ಗಮನ ಹರಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಜಿಲ್ಲೆಯ ಹಲವೆಡೆ ಮನೆಗಳು ಹಾನಿಯಾಗಿರುವ ಘಟನೆಗಳು ನಡೆದಿವೆ. ಕೂಡಲೇ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ, ಪರಿಹಾರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಸಾರ್ವಜನಿಕರಲ್ಲಿ ಮನವಿ: ವ್ಯಾಪಕ ಮಳೆಯಿಂದಾಗಿ ಜಿಲ್ಲೆಯಲ್ಲಿರುವ ನದಿ, ಹಳ್ಳಗಳು, ಕೆರೆ, ಬಾವಿಗಳೆಲ್ಲಾ ಭರ್ತಿಯಾಗಿವೆ. ಈ ಸಂದರ್ಭದಲ್ಲಿ ಯಾರೊಬ್ಬರೂ ಕೂಡ ನದಿ, ಹಳ್ಳ ಕೊಳ್ಳ, ಸೇತುವೆಗಳನ್ನು ದಾಟಲು ಪ್ರಯತ್ನಿಸಬಾರದು. ನೀರು ಹರಿಯುವ ಸ್ಥಳಗಳಲ್ಲಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಬಾರದು ಎಂದು ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

Don't Miss

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...
error: Content is protected !!