ಕಾರವಾರ: ರಾಜ್ಯ ಸರಕಾರ, ಜಿಲ್ಲಾಡಳಿತ ಕೊರೊನಾ ಸೋಂಕಿತ ಚಿಕಿತ್ಸೆಗೆ ಹಾಗೂ ಕ್ವಾರಂಟೈನ್ ನಲ್ಲಿ ಇರುವವರಿಗೆ ಎಲ್ಲಾ ರೀತಿಯ ಸೂಕ್ತ ವ್ಯವಸ್ಥೆಯನ್ನು ಮಾಡಿದೆ ಎಂದು ಸಚಿವ ಶಿವರಾಮ ಹೆಬ್ಬಾರ್ ಅವರು ಹೇಳಿದರು.
ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಕ್ವಾರಂಟೈನ್ ನಲ್ಲಿ ಇರುವವರ ಜೊತೆಯಲ್ಲಿ ಮಂಗಳವಾರ ವಿಡಿಯೋ ಸಂವಾದದ ಮೂಲಕವಾಗಿ ಮಾತನಾಡಿ ಸಚಿವರು ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿದರು.
ರಾಜ್ಯ ಸರ್ಕಾರದ ಜಿಲ್ಲೆಗೆ ಬೇಕಾಗಿರುವ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದೆ ಜಿಲ್ಲಾಡಳಿತವು ಸಹ ಕ್ವಾರಂಟೈನ್ ನಲ್ಲಿ ಇರುವವರಿಗೆ ಎಲ್ಲಾ ಸೌಕರ್ಯಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ. ಯಾರು ಭಯಪಡುವ ಅಗತ್ಯ ಇಲ್ಲಾ ನಾವೆಲ್ಲರೂ ನಿಮ್ಮ ಜೊತೆಯಲ್ಲಿ ಇರುವುದಾಗಿ ಕ್ವಾರಂಟೈನ್ ನಲ್ಲಿ ಇರುವವರಿಗೆ ಸಚಿವರು ಧೈರ್ಯ ತುಂಬಿದರು.