Monday, July 4, 2022

Latest Posts

ಕಾರಿನ ಮೇಲೆ ಮಗುಚಿ ಬಿದ್ದ ಮರಳು ತುಂಬಿದ ಲಾರಿ: 8 ಮಂದಿ ದುರ್ಮರಣ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮರಳು ತುಂಬಿದ ಲಾರಿಯೊಂದು ಸ್ಕಾರ್ಪಿಯೋ ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ 8 ಮಂದಿ  ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಕೌಸಂಭಿ ಜಿಲ್ಲೆಯಲ್ಲಿ ನಡೆದಿದೆ.

ಸ್ಕಾರ್ಪಿಯೋ ಕಾರಿನಲ್ಲಿದ್ದ 10 ಮಂದಿ ಪ್ರಯಾಣಿಕರು ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದರು ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿರುವ ವೇಳೆ ಮರಳು ತುಂಬಿದ್ದ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಈ ಘಟನೆಯಲ್ಲಿ 7  ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಹಿಳೆಯೊಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಕೌಸಂಭಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಹಂತದ ತನಿಖೆಯಲ್ಲಿ  ಲಾರಿ ಟಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣಕ್ಕೆ ಸಿಗದೆ ಮಗುಚಿಬಿದ್ದಿದೆ ಎಂದು ವರದಿಯಾಗಿದೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss