Saturday, July 2, 2022

Latest Posts

ಕಾರು ಡಿಕ್ಕಿ: ಓರ್ವ ಬಾಲಕ ಸೇರಿದಂತೆ ಎರಡು ರಾಸುಗಳು ಸ್ಥಳದಲ್ಲೇ ಸಾವು

ಹೊಸ ದಿಗಂತ ವರದಿ, ಶ್ರೀರಂಗಪಟ್ಟಣ :

ಹೆದ್ದಾರಿ ದಾಟುತ್ತಿದ್ದ ವೇಳೆ ಅತಿವೇಗವಾಗಿ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಸೇರಿದಂತೆ ಎರಡು ರಾಸುಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಗಣಂಗೂರು ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಕೆ.ಆರ್.ಪೇಟೆ ತಾಲ್ಲೂಕಿನ ಡಿಂಕಾ ಗ್ರಾಮದ ಆಕಾಶ್(11) ಮೃತ ಬಾಲಕ. ಈತ ಗಣಂಗೂರು ಗ್ರಾಮದ ತನ್ನ ಅಜ್ಜಿಯ ಮನೆಗೆ ಬಂದಿದ್ದ ಎನ್ನಲಾಗಿದ್ದು, ಬುಧವಾರ ಬೆಳಿಗ್ಗೆ ತನ್ನ ಅಜ್ಜಿಯೊಂದಿಗೆ ರಾಸುಗಳನ್ನು ಹಿಡಿದು ಜಮೀನಿಗೆ ತೆರಳುತ್ತಿದ್ದ ವೇಳೆ ಬೆಂಗಳೂರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕ ಹಾಗೂ ಎರಡು ರಾಸುಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು ಈ ಸಂಬಂಧ ಪಟ್ಟಣದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಆಕ್ರಂಧನ:
ಅಜ್ಜಿಯ ಮನೆಗೆ ಬಂದು ಶವವಾದ ಬಾಲಕನ ಕುಟುಂಬ ಸದಸ್ಯರ ಆಕ್ರಂಧನ ಮುಗಿಲು ಮುಟ್ಟಿತ್ತು. ಕೆಲ ಕಾಲ ಹೆದ್ದಾರಿ ರಸ್ತೆ ಸಂಚಾರವನ್ನು ಬಂದ್ ಮಾಡಿದ ಗ್ರಾಮಸ್ಥರು, ವೇಗವಾಗಿ ಬರುವ ವಾಹನಗಳ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಹೆದ್ದಾರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿದ್ದರಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕಾಗಮಿಸಿದ ಪಟ್ಟಣ ಪೋಲೀಸರು ಶಾಂತಿ ಕಾಪಾಡುವಂತೆ ಮನವಿ ಮಾಡಿ ಸಂಚಾರವನ್ನು ಸುಗಮಗೊಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss