ಹೊಸ ದಿಗಂತ ವರದಿ, ಮೈಸೂರು:
ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಐ ಇ ಕಾಲೇಜು ಬಳಿ ನಡೆದಿದೆ.
ಮೈಸೂರು ಹೊರಹೊಲಯದ ಶಿವಪುರದ ನಿವಾಸಿ ಸಂತೋಷ್ (33) ಮೃತ ದುರ್ದೈವಿ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ವಾಹನವೊಂದನ್ನು ಓವರ್ ಟೆಕ್ ಮಾಡಿಕೊಂಡು ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಸಂಚಾರಿ ಪೋಲಿಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಸಿಕೊಂಡಿದ್ದಾರೆ.