ಹಾಸನ: ಬೇಲೂರು ರಸ್ತೆಯ ರಾಯಪುರ ಎಂಬಲ್ಲಿ ಕಾರು-ಬಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಓವ೯ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೇಲೂರು ತಾಲ್ಲೂಕಿನ ರಾಯಪುರ ಸಮೀಪ ಅಪಘಾತ ಸಂಭವಿಸಿದ್ದು,ಕೆ.ಎಸ್.ಆರ್.ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಸಯ್ಯದ್(26) ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಓರ್ವ ನ ಸ್ಥಿತಿ ಗಂಭೀರವಾಗಿದೆ.
ಮೃತರು ಹಾಗೂ ಗಾಯಾಳುಗಳು ಬೆಂಗಳೂರು ಮೂಲದವರೆಂದು ಹೇಳಲಾಗಿದ್ದು,ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.