spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾರ್ಕಳದಲ್ಲಿ ವಿಪತ್ತು ನಿರ್ವಹಣಾ ಕೇಂದ್ರ ಸ್ಥಾಪನೆಗೆ 10 ಕೋಟಿ ರೂ. ಮಂಜೂರು: ಕಂದಾಯ ಸಚಿವ ಆರ್. ಅಶೋಕ್

- Advertisement -Nitte

ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ವಿಪತ್ತು ನಿರ್ವಹಣಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರಕಾರ 10 ಕೋಟಿ ರೂ. ಮಂಜೂರು ಮಾಡಲಿದೆ ಎಂದು ರಾಜ್ಯ ಕಂದಾಯ ಸಚಿವ ಆರ್. ಅಶೋಕ್ ಘೋಷಿಸಿದ್ದಾರೆ.
ಶುಕ್ರವಾರ ಉಡುಪಿಯಲ್ಲಿ ಮಳೆ ಪರಿಸ್ಥಿತಿ ಪರಿಶೀಲನೆಗೆ ಬಂದಿದ್ದ ಸಚಿವರು, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಮನವಿಯಂತೆ ವಿಪತ್ತು ನಿರ್ವಹಣಾ ಕೇಂದ್ರವನ್ನು ಮಂಜೂರು ಮಾಡಿದ್ದಾರೆ.
ಮುಂದಿನ 15 ದಿನಗಳಲ್ಲಿ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಲಾಗುತ್ತದೆ. ಅದಕ್ಕೆ ತಕ್ಷಣ ಅನುಮೋದನೆ ಕೊಡಲಾಗುತ್ತದೆ‌. ಜಿಲ್ಲೆಯಲ್ಲಿ ಕಡಲುಕೊರೆತ, ನೆರೆ ಅಥವಾ ಕೋವಿಡ್ ಮೊದಲಾದ ಸಂದರ್ಭಗಳಲ್ಲಿ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ಕಲ್ಪಿಸಲು ಸುಜ್ಜಿತವಾದ ಭವನ ನಿರ್ಮಿಸಬೇಕು. ಅದರಲ್ಲಿ ಆಸ್ಪತ್ರೆ, ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವಾಸ್ತವ್ಯ ವ್ಯವಸ್ಥೆ, ಕ್ಯಾಂಟೀನ್, ಅಡುಗೆಮನೆ, ಗ್ರಂಥಾಲಯ ಮೊದಲಾದ ಎಲ್ಲ ವ್ಯವಸ್ಥೆಗಳನ್ನು ಒಳಗೊಂಡ ಆಧುನಿಕ ಹಾಗೂ ಸುಸಜ್ಜಿತವಾದ ವಿಪತ್ತು ನಿರ್ವಹಣಾ ಕೇಂದ್ರ ನಿರ್ಮಿಸಲಾಗುತ್ತದೆ. ಇದು ವರ್ಷದ ನಾಲ್ಕು ತಿಂಗಳು ನೆರೆ ಪರಿಹಾರಕ್ಕೆ ಮೀಸಲಿಟ್ಟು, ಉಳಿದ 8 ತಿಂಗಳು ಕಾಲ ಬೇರೆ ಸರಕಾರಿ ಕಾರ್ಯಕ್ರಮಗಳಿಗೆ ಬಳಸಲು ಅನುಮತಿ ನೀಡಲಾಗುತ್ತದೆ ಎಂದು ಸಚಿವರು ವಿವರಿಸಿದರು.
ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ಉಂಟಾದರೆ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ಕಲ್ಪಿಸಲು ಈಗಾಗಲೇ ಶಾಲಾ ಕಾಲೇಜು ಕಟ್ಟಡಗಳನ್ನು ಗುರುತಿಸಿ, ಜಿಲ್ಲಾಡಳಿತದ ಅಧೀನಕ್ಕೆ ಪಡೆದುಕೊಂಡು ವ್ಯವಸ್ಥೆ ಮಾಡಲಾಗುತ್ತಿದೆ. ಅಗತ್ಯವಿದ್ದರೆ ಸಂತ್ರಸ್ತರನ್ನು ಅಲ್ಲಿ ಸ್ಥಳಾಂತರಿಸಿ ಅವರಿಗೆ ಊಟ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳನ್ನು ನೀಡಲು ವ್ಯವಸ್ಥೆ ಮಾಡಲಾಗುತ್ತದೆ. ತರಾತುರಿಯಲ್ಲಿ ಯಾವುದೂ ಆಗಬಾರದು. ಅದು ಅನಾಹುತಕ್ಕೆ ದಾರಿಯಾಗಬಾರದು. ಅದಕ್ಕಾಗಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ 15 ದಿನಗಳ ಹಿಂದೆಯೇ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ‌ ಎಂದು ಸಚಿವರು ತಿಳಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss