Wednesday, July 6, 2022

Latest Posts

ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 30 ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಳ್ಳಂಬೆಳಗ್ಗೆ ದೆಹಲಿಯ ಓಖ್ಲಾ ಪ್ರದೇಶದ ಸಂಜಯ್ ಕಾಲೋನಿಯಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ 30-40 ಮಂದಿಯನ್ನು ರಕ್ಷಿಸಲಾಗಿದೆ.

ತಡರಾತ್ರಿ 2 ಗಂಟೆ ವೇಳೆಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳು ಅಗ್ನ ಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ 30 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದ್ದು, ಸುಮಾರು 180ಕ್ಕೂ ಹೆಚ್ಚು ಮನೆಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿವೆ.

ಲಕ್ಷಾಂತರ ಮೌಲ್ಯದ ಆಸ್ತಿ ನಾಶವಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿ ತಿಳಿಸಿದರು. ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ದೆಹಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಲಿದ್ದಾರೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss