Thursday, July 7, 2022

Latest Posts

ಕಾರ್ಮಿಕರ ಮುಷ್ಕರ: ನಾಳೆ ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಸಂಚಾರವಿಲ್ಲ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸಿ ಒತ್ತಾಯಿಸಿ ಸಾರಿಗೆ ನಿಗಮದ ಕಾರ್ಮಿಕ ಒಕ್ಕೂಟ ನಾಳೆ ಕರೆ ನೀಡಿರುವ ಪ್ರತಿಭಟನೆ ಹಿನ್ನಲೆಯಲ್ಲಿ ಸರ್ಕಾರಿ ಬಸ್ ಗಳ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.

ಸಾರಿಗೆ ನಿಗಮಗಳ ಕಾರ್ಮಿಕರು ಹಾಗೂ ಇತರ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಧಾರವಾಡದಿಂದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಜಾಥಾ ಹೊರಡಲಿದೆ.

ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ನಾಲ್ಕು ಸಾರಿಗೆ ನಿಗಮಗಳ ನೌಕರರು ಇದರಲ್ಲಿ ಪಾಲ್ಗೊಳ್ಳುವುದರಿಂದ ಸರ್ಕಾರಿ ಬಸ್ ಗಳ ಸಂಚಾರ ಸ್ಥಗೀತಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss