Wednesday, July 6, 2022

Latest Posts

ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದೆ: ಶಾಸಕ ಕೆ. ರಘುಪತಿ ಭಟ್

ಉಡುಪಿ: ಉಡುಪಿಯ ಅಭಿವೃದ್ಧಿಯ ಕುರಿತು ಪ್ರಣಾಳಿಕೆಯಲ್ಲಿ ತಿಳಿಸಿದ ಭರವಸೆಯನ್ನು ಹಂತಹಂತವಾಗಿ ಈಡೇರಿಸುತ್ತಿದ್ದೇವೆ. ಈಗಾಗಲೇ ಪ್ರಮುಖ ಕಾಮಗಾರಿಗಳು ಆರಂಭಗೊಂಡು ಪ್ರಗತಿಯಲ್ಲಿವೆ. ಜನ ನಮ್ಮ ಮೇಲೆ ಇಟ್ಟ ವಿಶ್ವಾಸವನ್ನು ಉಳಿಸಿ ಮುನ್ನಡೆಯಬೇಕಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಅವರು ಗುರುವಾರ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ನಗರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಭಿನಂದನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜನಸಂಘದ ಕಾಲದಿಂದಲೂ ಡಾ. ವಿ. ಎಸ್. ಆಚಾರ್ಯ ಅವರ ದೂರದೃಷ್ಟಿಯ ಆಡಳಿತದಿಂದ ಉಡುಪಿ ನಗರದಲ್ಲಿ ಅಭಿವೃದ್ಧಿಯ ಶಖೆ ಆರಂಭವಾಗಿತ್ತು. ಜನ ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ. ನಮ್ಮ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದೆ. ನಮ್ಮ ಮೇಲೆ ಇಟ್ಟ ವಿಶ್ವಾಸ, ನಿರೀಕ್ಷೆಯನ್ನು ಹುಸಿಗೊಳಿಸದೆ, ಎಲ್ಲರೂ ಒಟ್ಟಾಗಿ ಉಡುಪಿಯನ್ನು ಅಭಿವೃದ್ಧಿಯತ್ತ ಮುನ್ನಡೆಸೋಣ ಎಂದರು.
ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸರೋಜಾ ಶೆಟ್ಟಿಗಾರ್, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ ಮತ್ತು ನಗರಸಭಾ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss