Tuesday, June 28, 2022

Latest Posts

ಕಾಲಾಗ್ನಿ ಶಮನ ದತ್ತಾತ್ರೇಯ ಸ್ವಾಮಿ ದರ್ಶನ ಪಡೆದ ಸಿಎಂ ಯಡಿಯೂರಪ್ಪ

ಹೊಸದಿಗಂತ ವರದಿ, ಮೈಸೂರು:

ಸಚಿವ ಸಂಪುಟ ವಿಸ್ತರಣೆ, ನಿಗಮಮಂಡಳಿಗಳ ನೇಮಕಾತಿಯ ಒತ್ತಡದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒತ್ತಡ ಶಮನಕ್ಕಾಗಿ ಶ್ರೀ ಕಾಲಾಗ್ನಿ ಶಮನ ದತ್ತಾತ್ರೇಯ ಸ್ವಾಮಿ ದರ್ಶನ ಪಡೆದರು.

ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಬುಧವಾರ ಮೈಸೂರಿನ ಊಟಿ ರಸ್ತೆಯಲ್ಲಿರುವ ಅವಧೂತ ದತ್ತ ಪೀಠಕ್ಕೆ ಭೇಟಿ ನೀಡಿದರು. ಈ ವೇಳೆ ಶ್ರೀ ಕಾಲಾಗ್ನಿ ಶಮನ ದತ್ತಾತ್ರೇಯ ಸ್ವಾಮಿ ದರ್ಶನ ಪಡೆದರಲ್ಲದೆ, ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss