spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಲೇಜು ಶುರು ಮಾಡಿ, ಆದರೆ ಅರ್ಧಕ್ಕಿಂತ ಜಾಸ್ತಿ ವಿದ್ಯಾರ್ಥಿಗಳು ಬೇಡ: ಯುಜಿಸಿಯಿಂದ ಹೊಸ ಮಾರ್ಗಸೂಚಿ ಬಿಡುಗಡೆ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ ಮರು ಆರಂಭಕ್ಕೆ ಯುಜಿಸಿ ಮತ್ತೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರನ್ವಯ ಕಾಲೇಜು ಶುರು ಮಾಡಿ, ಆದರೆ ಅರ್ಧಕ್ಕಿಂತ ಜಾಸ್ತಿ ವಿದ್ಯಾರ್ಥಿಗಳು ಬೇಡ ಎಂದಿದೆ.
ಹೌದು, ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್​, ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳನ್ನ ಮರು ಆರಂಭಿಸಬಹುದು. ಆದರೆ ಶೇ. 50ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಇರಬಾರದು ಎಂಬ ಯುಜಿಸಿ ಮಾರ್ಗಸೂಚಿಯನ್ನ ಪಾಲಿಸಲೇಬೇಕು.ಕೋವಿಡ್​-19 ಹಿನ್ನೆಲೆಯಲ್ಲಿ ಎಲ್ಲ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದಿದ್ದಾರೆ.
ಇನ್ನು ವಿದ್ಯಾರ್ಥಿಗಳಿಗೆ ಆನ್ಲೈನ್​ ಕ್ಲಾಸ್​ ಮೂಲಕ ಅಭ್ಯಾಸ ಮಾಡುವ ಅವಕಾಶವಿದ್ದು, ವಿಜ್ಞಾನ, ತಂತ್ರಜ್ಞಾನ ಹೊರತಾದ ಇತರ ಎಲ್ಲ ವಿಷಯಗಳಿಗೆ ಸಂಬಂಧಿಸಿದಂತೆ ಆನ್ಲೈನ್ ಶಿಕ್ಷಣ ಇರಲಿದೆ ಎಂದರು.
ಹಾಸ್ಟೆಲ್​ಗಳನ್ನ ಮತ್ತೆ ತೆರೆಯುವ ಸಾಧ್ಯತೆ ಇದೆ. ಆದ್ರೆ, ಒಂದು ಕೊಠಡಿಯಲ್ಲಿ ಒಬ್ಬನಿಗಿಂತ ಹೆಚ್ಚು ವಿದ್ಯಾರ್ಥಿಗಳು ಇರಬಾರದು. ಇನ್ನು ಸೋಂಕಿತ ವಿದ್ಯಾರ್ಥಿಗೆ ಯಾವುದೇ ಕಾರಣಕ್ಕೂ ಹಾಸ್ಟೆಲ್​ನಲ್ಲಿ ಉಳಿಯಲು ಅವಕಾಶವಿಲ್ಲ ಎಂದವರು ತಿಳಿಸಿದ್ದಾರೆ.
ಯುಜಿಸಿ ಈ ಹಿಂದೆ ಎಂದರೆ ಏಪ್ರಿಲ್​ 29 ಮತ್ತು ಜುಲೈ 6ರಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಇದೀಗ ಮತ್ತೊಮ್ಮೆ ಹೊಸದಾಗಿ ಮಾರ್ಗಸೂಚಿ ಪ್ರಕಟಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss