spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾವೇರಿಯಲ್ಲಿ ಪ್ರವಾಹ: ಕುಶಾಲನಗರದ ತಗ್ಗು ಪ್ರದೇಶಗಳು ಜಲಾವೃತ

- Advertisement -Nitte

ಕುಶಾಲನಗರ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ಹಾರಂಗಿ ನದಿಗಳಲ್ಲಿ ಪ್ರವಾಹ ಏರ್ಪಟ್ಟಿದ್ದು, ಪರಿಣಾಮವಾಗಿ ಕುಶಾಲನಗರ ಹಾಗೂ ಸುತ್ತಮುತ್ತಲ ತಗ್ಗು ಪ್ರದೇಶಗಳು ಬಹುತೇಕ ಜಲಾವೃತಗೊಂಡಿವೆ.
ಕುಶಾಲನಗರ-ಮಡಿಕೇರಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಇಲ್ಲಿಗೆ ಸಮೀಪದ ತಾವರೆಕೆರೆ ಮತ್ತು ಗಂಧದಕೋಟಿ ಬಳಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ವಾಹನಗಳು ಹಾರಂಗಿ ಮಾರ್ಗವಾಗಿ ಸುತ್ತಿ ಬಳಸಿ ಸಂಚರಿಸುತ್ತಿವೆ.
ಮುಳ್ಳುಸೋಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುವೆಂಪು ಬಡಾವಣೆಯ ಅನೇಕ ಮನೆಗಳು ಜಲಾವೃತಗೊಂಡಿದೆ.
ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕಾವೇರಿ: ಕಾವೇರಿ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಕಣಿವೆಯ ತೂಗುಸೇತುವೆ ಮೇಲೆ ಸಾರ್ವಜನಿಕರ ಸಂಚಾರವನ್ನು ನಿಷೇಧಿಸಲಾಗಿದೆ.
ಕುಶಾಲನಗರ ಡಿವೈಎಸ್ ಪಿ ಶೈಲೇಂದ್ರ, ವೃತ್ತ ನಿರೀಕ್ಷಕ ಮಹೇಶ್, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನಂದೀಶ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್, ಎನ್‍ಡಿಆರ್‍ಎಫ್ ತಂಡ ಕಣಿವೆಯ ತೂಗುಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದೆ.
ಕಣಿವೆ ತೂಗುಸೇತುವೆಯ ಒಂದು ಭಾಗವು ನೀರಿನಿಂದ ಮುಳುಗಡೆಯಾಗಿದೆ. ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣಾಧಿಕಾರಿ ನೇತೃತ್ವದಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಜೋಳ-ಶುಂಠಿ ಬೆಳೆ ಜಲಾವೃತ: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಈ ವ್ಯಾಪ್ತಿಯ ನೂರಾರು ರೈತರ ಜೋಳ ಮತ್ತು ಶುಂಠಿ ಬೆಳೆಗಳು ನೀರಿನಲ್ಲಿ ಮುಳುಗಡೆಯಾಗಿವೆ.
ಕುಶಾಲನಗರ ಹೋಬಳಿ ವ್ಯಾಪ್ತಿಯ ಕೂಡಿಗೆ, ಕೂಡುಮಂಗಳೂರು, ಹೆಬ್ಬಾಲೆ, ತೂರೆನೂರು ಗ್ರಾಮಗಳ ನೂರಾರು ಎಕರೆ ಪ್ರದೇಶದಲ್ಲಿ ಬೆಳೆಸಲಾದ ಬೆಳೆಗಳು ನೀರಿನಿಂದ ಜಲಾವೃತಗೊಂಡು ಕೊಳೆಯುವ ಪ್ರಸಂಗ ಎದುರಾಗಿದೆ.
ಈ ವ್ಯಾಪ್ತಿಯ ತಗ್ಗುಪ್ರದೇಶದಲ್ಲಿ ಬೆಳೆಸಲಾಗಿದ ಶುಂಠಿಯು ನೀರಿನಲ್ಲಿ ತೇಲುತ್ತಿದೆ.
ಕಂದಾಯ ಇಲಾಖೆಯ ಅಧಿಕಾರಿಗಳ ಭೇಟಿ: ಕುಶಾಲನಗರ ಹೋಬಳಿ ವ್ಯಾಪ್ತಿಯ ಹೆಬ್ಬಾಲೆ, ತೂರೆನೂರು, ಕಣಿವೆ, ಕೂಡಿಗೆ, ಕೂಡುಮಂಗಳೂರು ವ್ಯಾಪ್ತಿಯಲ್ಲಿ ಕಾವೇರಿ ನದಿ ನೀರಿನಿಂದ ಜಲಾವೃತಗೊಂಡ ಪ್ರದೇಶಗಳಿಗೆ ಕುಶಾಲನಗರ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ನೀರಿನ ಮಟ್ಟ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನದಿ ದಂಡೆಯ ಸಮೀಪದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ನೋಟಿಸ್ ನೀಡಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ. ಅಲ್ಲದೆ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಣಿವೆಯ ತೂಗುಸೇತುವೆ ಸ್ಧಳಕ್ಕೆ ಭೇಟಿ ನೀಡಿ ಸ್ಧಳ ಪರಿಶೀಲನೆ ಮಾಡಿರುವ ಅಧಿಕಾರಿಗಳು, ಆ ಭಾಗದಲ್ಲಿ ಯಾರೂ ತಿರುಗಾಡದಂತೆ ಅಡ್ಡಲಾಗಿ ಗೋಡೆ ನಿರ್ಮಿಸಿದ್ದಾರೆ.
ಕುಶಾಲನಗರ ಕಂದಾಯ ಪರಿವೀಕ್ಷಕ ಮಧುಕುಮಾರ್, ಕುಶಾಲನಗರ ಹೋಬಳಿ ಕೊರೋನಾ ನೋಡಲ್ ಅಧಿಕಾರಿ ವರದರಾಜ್, ಗ್ರಾಮ ಲೆಕ್ಕಾಧಿಕಾರಿ ಸಚಿನ್ ಕುಲಕರ್ಣಿ, ಅಭಿವೃದ್ಧಿ ಅಧಿಕಾರಿ ರಾಕೇಶ್ ಸಿಬ್ಬಂದಿ ವರ್ಗದವರು ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss