ಕಾಶ್ಮೀರ: ಜಮ್ಮು-ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಭಾನುವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಜೈಷೆ ಮೊಹಮ್ಮದ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಐವರು ಉಗ್ರರು ಹತರಾಗಿದ್ದಾರೆ. ರೇಬನ್ ಗ್ರಾಮದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಬೆಳಗ್ಗೆ ಸೇನೆ ಶೋಧನೆ ನಡೆಸಿದ್ದು, ಉಗ್ರರು ಹುಂಡಿನ ದಾಳಿ ಆರಂಭಿಸಿದ್ದಾರೆ. ಈ ಸಂದರ್ಭ ಉಗ್ರರನ್ನು ಹೊಡೆದುರುಳಿಸಲಾಗಿದೆ. ಹೆಚ್ಚಿನ ಶೋಧನೆ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.