Saturday, August 13, 2022

Latest Posts

ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಯುವಮೋರ್ಚಾ ಮಾರ್ಚ್: ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ಕಾಸರಗೋಡು: ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಆರೋಪಿಯಾದ ಕೇರಳದ ಉನ್ನತ ಶಿಕ್ಷಣ ಇಲಾಖೆ ಸಚಿವ ಕೆ.ಟಿ.ಜಲೀಲ್ ಹಾಗೂ ಜ್ಯುವೆಲ್ಲರಿ ಸಂಸ್ಥೆ ಹೂಡಿಕೆ ವಂಚನೆ ಆರೋಪಿಯಾದ ಮಂಜೇಶ್ವರ ಶಾಸಕ ಎಂ.ಸಿ.ಖಮರುದ್ದೀನ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಯುವಮೋರ್ಚಾದ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಾಸರಗೋಡು ಕಲೆಕ್ಟರೇಟ್ ಗೆ ಶುಕ್ರವಾರ ಮಧ್ಯಾಹ್ನ ಬೃಹತ್ ಪ್ರತಿಭಟನಾ ಮಾರ್ಚ್ ನಡೆಯಿತು.
ಈ ಸಂದರ್ಭದಲ್ಲಿ ಯುವಮೋರ್ಚಾ ಕಾರ್ಯಕರ್ತರನ್ನು ಜಿಲ್ಲಾಧಿಕಾರಿ ಕಚೇರಿ ಕಂಪೌಂಡ್ ನೊಳಗೆ ಪ್ರವೇಶಿಸದಂತೆ ತಡೆದ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು. ಈ ವೇಳೆ ಯುವಮೋರ್ಚಾ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಅಂಜು ಜೋಸ್ಟಿ ಸೇರಿದಂತೆ ಅನೇಕ ಮಂದಿ ಯುವಮೋರ್ಚಾ ನೇತಾರರು ಹಾಗೂ ಕಾರ್ಯಕರ್ತರು ಗಾಯಗೊಂಡರು.
ರಾಜ್ಯದ ಪಿಣರಾಯಿ ವಿಜಯನ್ ಸರಕಾರದ ಯಾವುದೇ ಬೆದರಿಕೆ, ಜಲಫಿರಂಗಿ, ಲಾಠಿಏಟಿಗೆ ಜಗ್ಗದ ಯುವಮೋರ್ಚಾ ಕಾರ್ಯಕರ್ತರು ಪ್ರಬಲ ಪ್ರತಿಭಟನೆ ಕೈಗೊಂಡರು. ಅಲ್ಲದೆ ಕಳಂಕಿತ ಸಚಿವರು ಮತ್ತು ಶಾಸಕರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಅವರಿಬ್ಬರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಧರಣಿ ನಡೆಸಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss