ಕಾಸರಗೋಡು ಜಿಲ್ಲೆಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲು ಒತ್ತಾಯ

0
130

ಕಾಸರಗೋಡು: ಇಡೀ ದೇಶವನ್ನು ಕಾಡುತ್ತಿರುವ ಕೊರೊನಾ ವೈರಸ್ ಕಾಸರಗೋಡಿನಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಹೀಗಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ, ಕಾಸರಗೋಡು ಜಿಲ್ಲೆಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲು ಯುವ ಸಮುದಾಯ ಸಾಮಾಜಿಕ ಹೋರಾಟಕ್ಕೆ ಮುಂದಾಗಿದೆ.

ಕಾಸರಗೋಡಿನ ಜನ ಹ್ಯಾಷ್ ಟ್ಯಾಗ್ ಮೂಲಕ ಕೇಂದ್ರದ ಗಮನ ಸೆಳೆಯಲು ಮುಂದಾಗಿದ್ದಾರೆ. ಉತ್ತಮ ಶಿಕ್ಷಣ ವ್ಯವಸ್ಥೆಗಳಿಲ್ಲದೆ ಇಲ್ಲಿನ ವಿದ್ಯಾರ್ಥಿಗಳು ಮಂಗಳೂರಿಗೆ ಪ್ರತಿನಿತ್ಯ 30 ಕಿ.ಮಿ ಪ್ರಯಾಣಿಸಬೇಕಾಗಿದೆ. ಮೂಲಭೂತ ವ್ಯವಸ್ಥೆಗಳಿಂದಲೂ ಕಾಸರಗೋಡು ವಂಚಿತವಾಗಿದೆ. ಆರೋಗ್ಯ, ಶಿಕ್ಷಣ ಇಲಾಖೆಗಳ ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ, ‌ಕಾಸರಗೋಡು ಜಿಲ್ಲೆಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲು ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಮೊಳಗಿದೆ.

ಈ‌ ನಡುವೆ ಪ್ರತಿ ನಿತ್ಯ ಕೊರೊನಾ ಸೋಂಕಿತರ ಸಂಖ್ಯೆ ಬೆಳೆಯುತ್ತಲೇ ಇದೆ. ಕೇಂದ್ರ ಸರಕಾರವು ಘೋಷಿಸಿರುವ ಅಪಾಯದ ವಲಯಗಳ ಪಟ್ಟಿಯಲ್ಲಿ ಕಾಸರಗೋಡು ಕೂಡ ಸ್ಥಾನ ಪಡೆದಿದೆ. ಆದರೆ ರಾಜ್ಯ ಸರಕಾರ ಗಡಿ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದೆ ಹೊರತು ಕೊರೊನಾ ತಡೆಗಟ್ಟುವ ವಿಚಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ.

ಹೀಗಾಗಿ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ತಕ್ಷಣವೇ ಕಾಸರಗೋಡನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಸಾಮಾಜಿಕ ಹೋರಾಟಗಳು ನಡೆಯುತ್ತಿದೆ.

LEAVE A REPLY

Please enter your comment!
Please enter your name here