ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ಇಂದು ಬರೋಬ್ಬರಿ 137 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಅಂಕಿ ಅಂಶಗಳ ಪ್ರಕಾರ ಇಂದು ಒಟ್ಟು 347 ಮಂದಿ ಗುಣಮುಖರಾಗಿದ್ದಾರೆ. ಆತಂಕದ ವಿಚಾರವೆಂದರೆ ನಾಲ್ವರು ಆರೋಗ್ಯ ಕಾರ್ಯಕರ್ತರು ಇಂದು ಸೋಂಕಿಗೆ ತುತ್ತಾಗಿದ್ದಾರೆ. ಜಿಲ್ಲೆಲ್ಲಿ ಕೊರೋನಾ ನಿಯಂತ್ರಣಕ್ಕೆ ವ್ಯಾಪಕ ಕ್ರಮ ಕೈಗೊಂಡಿದ್ದರೂ ಸೋಂಕಿನ ಪ್ರಮಾಣ ಮಾತ್ರ ಹೆಚ್ಚುತ್ತಲೇ ಇದೆ. ಸದ್ಯ ಜಿಲ್ಲೆಯಲ್ಲಿ ಒಟ್ಟು 2167 ಮಂದಿ ಚಿಕಿತ್ಸೆಪಡೆಯುತ್ತಿದ್ದಾರೆ.