Thursday, August 11, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಜೊತೆಗೆ ಡೆಂಗ್ಯೂ ಭೀತಿ: ಹೆಚ್ಚುತ್ತಿವೆ ಪ್ರಕರಣಗಳು

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಜೊತೆಗೆ ಬೇಸಿಗೆಯ ಮಳೆಯ ಪ್ರಾರಂಭದೊಂದಿಗೆ ಸೊಳ್ಳೆಯಿಂದ ಹರಡುವ ರೋಗಗಳು ಹೆಚ್ಚೆಚ್ಚು ವರದಿಯಾಗುತ್ತಿವೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.
ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚು ವರದಿಯಾಗಿರುವುದರಿಂದ ಆರೋಗ್ಯ ಇಲಾಖೆಯು ತೀವ್ರ ಕಟ್ಟೆಚ್ಚರ ವಹಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರತಿರೋಧ ಕ್ರಮಗಳಿಗೂ ರೂಪು ನೀಡಲಾಗಿದೆ. ಇಲ್ಲಿಯವರೆಗೆ 9 ಜನರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ.
ಜನವರಿಯಿಂದ 21 ಮಲೇರಿಯಾ ಪ್ರಕರಣಗಳು ದಾಖಲಾಗಿವೆ. ಕಾಮಾಲೆ ರೋಗವೂ ಕೆಲವೆಡೆ ಹರಡುವ ಸಾಧ್ಯತೆಯನ್ನು ಗುರುತಿಸಲಾಗಿದೆ. ಕೋವಿಡ್ ಜೊತೆಗೆ, ನೀರಿನಿಂದ ಹರಡುವ ಮತ್ತು ಸೊಳ್ಳೆಯಿಂದ ಹರಡುವ ರೋಗಗಳು ಜನಸಾಮಾನ್ಯರನ್ನು ಹೈರಾಣಗೊಳಿಸುವ ಸಾಧ್ಯತೆಯನ್ನು ಅಧಿಕೃತರು ದೃಢಪಡಿಸಿದ್ದಾರೆ.
ಲಾಕ್ ಡೌನ್ ಅವಧಿಯಲ್ಲಿ ಮನೆಗಳಲ್ಲೇ ಉಳಿದುಕೊಂಡಿರುವ ನಾಗರಿಕರು ತಮ್ಮ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೊಳ್ಳೆಯಿಂದ ಹರಡುವ ಅಂಟುಜಾಡ್ಯಗಳಿಂದ ಪಾರಾಗಲು ಸ್ವಚ್ಚತೆ ಮತ್ತು ವಿವಿಧ ರೋಗಕಾರಕ ಸೊಳ್ಳೆ ನಿರ್ಮೂಲನೆ ಚಟುವಟಿಕೆಗಳನ್ನು ಖಚಿತಪಡಿಸಿಕೊಳ್ಳಬೇಕು. ನೀರು ಕಟ್ಟಿನಿಲ್ಲುವ ಪ್ರದೇಶಗಳಲ್ಲಿ ಕೆಲಸ ಮಾಡುವ ಜನರು ಹತ್ತಿರದ ಆರೋಗ್ಯ ಸಂಸ್ಥೆಗಳಿಂದ ಆಂಟಿರೆಟ್ರೋವೈರಲ್ ಔಷಧಿಯನ್ನು ಖರೀದಿಸಬೇಕು. ಜ್ವರ ಅಥವಾ ಇತರ ರೋಗಲಕ್ಷಣಗಳಿಗೆ ಚಿಕಿತ್ಸೆ ಪಡೆಯಲು ಸರ್ಕಾರಿ ಆಸ್ಪತ್ರೆಯಲ್ಲಿ ಅಧಿಕೃತರ ಸಮರ್ಪಕ ಸಲಹೆ – ಚಿಕಿತ್ಸೆಗೆ ಕೈಜೋಡಿಸಬೇಕು ಎಂದು ಜಿಲ್ಲಾ ಮಟ್ಟದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss