Sunday, June 26, 2022

Latest Posts

ಕಾಸರಗೋಡು| ಜಿಲ್ಲೆಯಲ್ಲಿ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚಳ ಆತಂಕಕಾರಿ: ಜಿಲ್ಲಾ ವೈದ್ಯಾಧಿಕಾರಿ

ಕಾಸರಗೋಡು: ಕೋವಿಡ್ ಸೋಂಕಿನ ಹರಡುವಿಕೆಯ ಮೂರನೇ ಹಂತದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ರೋಗಗಳ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚಳಗೊಳ್ಳುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಾರ್ವಜನಿಕರು ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.

ಕೇರಳ ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ತಿಳಿಸಿರುವ ಕಟ್ಟುನಿಟ್ಟುನ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಿ, ಜಾಗರೂಕತೆಯಿಂದ ಇರಬೇಕು. ಅಲ್ಲದೆ ಸೋಂಕಿನ ಸಾಮಾಜಿಕ ಹರಡುವಿಕೆಯನ್ನು ತಡೆಗಟ್ಟುವಂತೆ ಎಲ್ಲರೂ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಮೂರನೇ ಹಂತದ ಕಾಲಾವಧಿಯಲ್ಲಿ ವಿದೇಶಗಳಿಂದ 646 ಮಂದಿ, ವಿವಿಧ ರಾಜ್ಯಗಳಿಂದ 4976 ಮಂದಿ ಕಾಸರಗೋಡು ಜಿಲ್ಲೆಗೆ ಆಗಮಿಸಿದ್ದಾರೆ ಎಂದವರು ಹೇಳಿದ್ದಾರೆ.

ಈ ರೀತಿಯಾಗಿ ಬಂದವರು ಕೊರೋನಾ ಕಾನೂನುಗಳನ್ನು ಉಲ್ಲಂಘಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶಿಸುವುದಾಗಿ ಅವರು ಎಚ್ಚರಿಕೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss