Wednesday, June 29, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 533 ಮಂದಿಗೆ ಪಾಸಿಟಿವ್ , 464 ಜನರಿಗೆ ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಬುಧವಾರ 533 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 519 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 464 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 16,204 ಜನರಿಗೆ ಕೋವಿಡ್ ಸೋಂಕು ದೃಢಗೊಂಡಿದೆ. ಇದರಲ್ಲಿ 15,048 ಮಂದಿಗೆ ಸಂಪರ್ಕದಿಂದ ವೈರಸ್ ತಗಲಿದೆ. ರಾಜ್ಯದಲ್ಲಿ 20,237 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಎರ್ನಾಕುಳಂ ಜಿಲ್ಲೆಯಲ್ಲಿ 2059, ಕೊಲ್ಲಂ 1852, ತಿರುವನಂತಪುರ 1783, ಮಲಪ್ಪುರಂ 1744, ಪಾಲಕ್ಕಾಡು 1696, ತೃಶೂರು 1447, ಆಲಪ್ಪುಳ 1280, ಕಲ್ಲಿಕೋಟೆ 1240, ಕೋಟ್ಟಾಯಂ 645, ಕಣ್ಣೂರು 619, ಪತ್ತನಂತ್ತಿಟ್ಟ 545, ಕಾಸರಗೋಡು 533, ಇಡುಕ್ಕಿ 451, ವಯನಾಡು ಜಿಲ್ಲೆಯಲ್ಲಿ 310 ಜನರಿಗೆ ಕೊರೋನಾ ವೈರಸ್ ದೃಢೀಕರಿಸಲಾಗಿದೆ. ಈ ಮಧ್ಯೆ ಕೇರಳದಲ್ಲಿ ಕೋವಿಡ್ ಸೋಂಕು ಬಾಧಿಸಿ ಬುಧವಾರ 156 ಮಂದಿ ಅಸುನೀಗಿದರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 10,437 ಜನರು ಮೃತಪಟ್ಟರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss