Tuesday, June 28, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 79 ಮಂದಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 79 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 69 ಜನರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 52 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 5005 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 4506 ಜನರಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ರಾಜ್ಯದಲ್ಲಿ 4408 ಜನರು ಗುಣಮುಖರಾದರು.
ಎರ್ನಾಕುಳಂ ಜಿಲ್ಲೆಯಲ್ಲಿ 767, ಕಲ್ಲಿಕೋಟೆ 677, ಮಲಪ್ಪುರಂ 479, ಕೊಲ್ಲಂ 439, ಪತ್ತನಂತ್ತಿಟ್ಟ 427, ಕೋಟ್ಟಾಯಂ 399, ಆಲಪ್ಪುಳ 302, ತಿರುವನಂತಪುರ 296, ತೃಶೂರು 262, ಕಣ್ಣೂರು 239, ಇಡುಕ್ಕಿ 237, ವಯನಾಡು 226, ಪಾಲಕ್ಕಾಡು 176, ಕಾಸರಗೋಡು ಜಿಲ್ಲೆಯಲ್ಲಿ 79 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಈ ಮಧ್ಯೆ ಕೋವಿಡ್ ಸೋಂಕು ಬಾಧಿಸಿ ಕೇರಳದಲ್ಲಿ ಭಾನುವಾರ 21 ಮಂದಿ ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss