Monday, July 4, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 58 ಮಂದಿಗೆ ಕೊರೋನಾ ಪಾಸಿಟಿವ್

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 58 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 56 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 43 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 5615 ಜನರಿಗೆ ಕೊರೋನಾ ದೃಢಪಟ್ಟಿದೆ. ಇದರಲ್ಲಿ 5037 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 4922 ಜನರು ಗುಣಮುಖರಾದರು.
ಎರ್ನಾಕುಳಂ ಜಿಲ್ಲೆಯಲ್ಲಿ 719, ಕೋಟ್ಟಾಯಂ 715, ಪತ್ತನಂತ್ತಿಟ್ಟ 665, ತೃಶೂರು 616, ಕೊಲ್ಲಂ 435, ಕಲ್ಲಿಕೋಟೆ 426, ಆಲಪ್ಪುಳ 391, ತಿರುವನಂತಪುರ 388, ಮಲಪ್ಪುರಂ 385, ಪಾಲಕ್ಕಾಡು 259, ಕಣ್ಣೂರು 252, ವಯನಾಡು 175, ಇಡುಕ್ಕಿ 131, ಕಾಸರಗೋಡು ಜಿಲ್ಲೆಯಲ್ಲಿ 58 ಜನರಿಗೆ ಕೊರೋನಾ ದೃಢಗೊಂಡಿದೆ. ಈ ಮಧ್ಯೆ ಕೋವಿಡ್ ಬಾಧಿಸಿ ಕೇರಳದಲ್ಲಿ ಮಂಗಳವಾರ 24 ಮಂದಿ ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss