Wednesday, August 17, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 68 ಮಂದಿಗೆ ಗುಣಮುಖ: 58 ಜನರಿಗೆ ಕೊರೋನಾ ಸೋಂಕು

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 58 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 54 ಜನರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 68 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 5507 ಜನರಿಗೆ ಕೊರೋನಾ ದೃಢಪಟ್ಟಿದೆ. ಇದರಲ್ಲಿ 4952 ಮಂದಿಗೆ ಸಂಪರ್ಕದ ಮೂಲಕ ವೈರಸ್ ತಗಲಿದೆ. ರಾಜ್ಯದಲ್ಲಿ 4270 ಜನರು ಗುಣಮುಖರಾದರು.
ಎರ್ನಾಕುಳಂ ಜಿಲ್ಲೆಯಲ್ಲಿ 813, ಕೋಟ್ಟಾಯಂ 709, ಕಲ್ಲಿಕೋಟೆ 566, ಪತ್ತನಂತ್ತಿಟ್ಟ 482, ತೃಶೂರು 479, ಕೊಲ್ಲಂ 447, ಮಲಪ್ಪುರಂ 400, ತಿರುವನಂತಪುರ 350, ಆಲಪ್ಪುಳ 349, ಕಣ್ಣೂರು 273, ವಯನಾಡು 207, ಪಾಲಕ್ಕಾಡು 201, ಇಡುಕ್ಕಿ 173, ಕಾಸರಗೋಡು ಜಿಲ್ಲೆಯಲ್ಲಿ 58 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಈ ಮಧ್ಯೆ ಕೋವಿಡ್ ಬಾಧಿಸಿ ಕೇರಳದಲ್ಲಿ ಮಂಗಳವಾರ 25 ಮಂದಿ ಸಾವಿಗೀಡಾದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!