Monday, June 27, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 63 ಜನರಿಗೆ ಕೊರೋನಾ ಸೋಂಕು

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 63 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 58 ಜನರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 71 ಮಂದಿ ಗುಣಮುಖರಾದರು. ಕೇರಳದಲ್ಲಿ 6186 ಜನರಿಗೆ ಕೋವಿಡ್ ದೃಢಪಟ್ಟಿದೆ. ಇದರಲ್ಲಿ 5541 ಮಂದಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ರಾಜ್ಯದಲ್ಲಿ 4296 ಜನರು ಗುಣಮುಖರಾದರು.
ಎರ್ನಾಕುಳಂ ಜಿಲ್ಲೆಯಲ್ಲಿ 1019, ಕೋಟ್ಟಾಯಂ 674, ಕೊಲ್ಲಂ 591, ತೃಶೂರು 540, ಪತ್ತನಂತ್ತಿಟ್ಟ 512, ಮಲಪ್ಪುರಂ 509, ಕಲ್ಲಿಕೋಟೆ 481, ಆಲಪ್ಪುಳ 475, ತಿರುವನಂತಪುರ 404, ಕಣ್ಣೂರು 301, ವಯನಾಡು 245, ಪಾಲಕ್ಕಾಡು 242, ಇಡುಕ್ಕಿ 130, ಕಾಸರಗೋಡು ಜಿಲ್ಲೆಯಲ್ಲಿ 63 ಜನರಿಗೆ ಕೋವಿಡ್ ಸೋಂಕು ದೃಢಗೊಂಡಿದೆ. ಈ ಮಧ್ಯೆ ಕೊರೋನಾ ಬಾಧಿಸಿ ಕೇರಳದಲ್ಲಿ ಮಂಗಳವಾರ 26 ಮಂದಿ ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss