Wednesday, July 6, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 158 ಮಂದಿ ಗುಣಮುಖ: 104 ಜನರಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 104 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 91 ಜನರಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ಅಲ್ಲದೆ ಜಿಲ್ಲೆಯಲ್ಲಿ 158 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 5772 ಜನರಿಗೆ ಕೊರೋನಾ ದೃಢಪಟ್ಟಿದೆ. ಇದರಲ್ಲಿ 4989 ಮಂದಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ರಾಜ್ಯದಲ್ಲಿ 6719 ಜನರು ಗುಣಮುಖರಾದರು.
ಎರ್ನಾಕುಳಂ ಜಿಲ್ಲೆಯಲ್ಲಿ 797, ಮಲಪ್ಪುರಂ 764, ಕಲ್ಲಿಕೋಟೆ 710, ತೃಶೂರು 483, ಪಾಲಕ್ಕಾಡು 478, ಕೊಲ್ಲಂ 464, ಕೋಟ್ಟಾಯಂ 423, ತಿರುವನಂತಪುರ 399, ಆಲಪ್ಪುಳ 383, ಪತ್ತನಂತ್ತಿಟ್ಟ 316, ಕಣ್ಣೂರು 211, ಇಡುಕ್ಕಿ 188, ವಯನಾಡು 152, ಕಾಸರಗೋಡು ಜಿಲ್ಲೆಯಲ್ಲಿ 104 ಜನರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮಧ್ಯೆ ಕೋವಿಡ್ ಬಾಧಿಸಿ ಕೇರಳದಲ್ಲಿ ಶನಿವಾರ 25 ಮಂದಿ ಅಸುನೀಗಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss