Monday, July 4, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 87 ಜನರಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ , ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ 87 ಮಂದಿಗೆ ಕೋವಿಡ್ ಸೋಂಕು ದೃಢಗೊಂಡಿದೆ. ಈ ಪೈಕಿ 83 ಜನರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 106 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 6960 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಲ್ಲಿ 6339 ಮಂದಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ರಾಜ್ಯದಲ್ಲಿ 5283 ಜನರು ಗುಣಮುಖರಾದರು.
ಎರ್ನಾಕುಳಂ ಜಿಲ್ಲೆಯಲ್ಲಿ 1083, ಕಲ್ಲಿಕೋಟೆ 814, ಕೋಟ್ಟಾಯಂ 702, ಕೊಲ್ಲಂ 684, ಪತ್ತನಂತ್ತಿಟ್ಟ 557, ಮಲಪ್ಪುರಂ 535, ತಿರುವನಂತಪುರ 522, ಆಲಪ್ಪುಳ 474, ತೃಶೂರು 401, ಕಣ್ಣೂರು 321, ವಯನಾಡು 290, ಇಡುಕ್ಕಿ 256, ಪಾಲಕ್ಕಾಡು 234, ಕಾಸರಗೋಡು ಜಿಲ್ಲೆಯಲ್ಲಿ 87 ಜನರಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಮಧ್ಯೆ ಕೋವಿಡ್ ಬಾಧಿಸಿ ಕೇರಳದಲ್ಲಿ ಶನಿವಾರ 23 ಮಂದಿ ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss