Monday, July 4, 2022

Latest Posts

ಕಾಸರಗೋಡು| ಜಿಲ್ಲೆಯಲ್ಲಿ ಸತತ ಐದನೇ ದಿನ ಹೊಸ ಕೊರೋನಾ ಪ್ರಕರಣ ಇಲ್ಲ

ಕಾಸರಗೋಡು: ಜಿಲ್ಲೆಯಲ್ಲಿ ಸತತ ಐದನೇ ದಿನವಾದ ಮಂಗಳವಾರ ಕೂಡ ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣ ದಾಖಲಾಗಿಲ್ಲ. ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 179 ಮಂದಿಗೆ ಸೋಂಕು ತಗಲಿದ್ದು, ಇದೀಗ ಆಸ್ಪತ್ರೆಗಳಲ್ಲಿ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1135 ಮಂದಿ ಮನೆಗಳಲ್ಲಿ , 21 ಮಂದಿ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ. 262 ಮಂದಿ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ.
4867 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಲಭ್ಯ 4198 ಮಂದಿಯ ಫಲಿತಾಂಶ ನೆಗೆಟಿವ್ ಆಗಿದೆ. ಸೆಂಟಿನಲ್ ಸರ್ವೆಲೆನ್ಸ್ ಅಂಗವಾಗಿ ಜಿಲ್ಲೆಯ ಆರೋಗ್ಯ ಕಾರ್ಯಕರ್ತರು, ಇತರ ರಾಜ್ಯಗಳ ಕಾರ್ಮಿಕರು, ಸಾಮಾಜಿಕವಾಗಿ ಅತ್ಯಧಿಕ ಪ್ರಮಾಣದಲ್ಲಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರು ಸಹಿತ 420 ಮಂದಿಯ ಸ್ಯಾಂಪಲ್ ತಪಾಣೆಗೆ ಕಳುಹಿಸಲಾಗಿದೆ.
ಕೇರಳದಲ್ಲಿ ಮೂವರಿಗೆ ಸೋಂಕು
ಕೇರಳ ರಾಜ್ಯದಲ್ಲಿ ಮಂಗಳವಾರ ಹೊಸದಾಗಿ ಮೂವರಿಗೆ ಕೊರೋನಾ ವೈರಸ್ ಸೋಂಕು ಬಾಧಿಸಿದೆ. ಈ ಮೂವರು ವಯನಾಡು ಜಿಲ್ಲೆಯವರು. ಈ ಮೂವರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಚೆನ್ನೈಗೆ ಹೋಗಿದ್ದ ಆಂಬ್ಯುಲೆನ್ಸ್ ಚಾಲಕನ ತಾಯಿ, ಪತ್ನಿ ಹಾಗೂ ಕ್ಲೀನರ್‍ನ ಪುತ್ರನಿಗೆ ಸೋಂಕು ಬಾಧಿಸಿರುವುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss